spot_img
spot_img
spot_img
spot_img
spot_img

ಬೆಳಗಾವಿಯಲ್ಲಿ ಭೀಕರ ಸರಣಿ ಅಪಘತ – 50 ಮೀಟರ್ ಹಾರಿ ಬಿದ್ದ ಯುವತಿ ಗಂಭೀರ

Published on

spot_img

ಬೆಳಗಾವಿ: ವೇಗವಾಗಿ ಬಂದ ಕಾರೊಂದು (Car) ಹಿಂಬದಿಯಿಂದ ಸ್ಕೂಟಿಗೆ (Scooty) ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಯುವತಿ (Young Woman) 50 ಮೀಟರ್ ಹಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

ಬೆಳಗಾವಿಯ ಬ್ರಹ್ಮನಗರ ನಿವಾಸಿ ದಿವ್ಯಾ ಸುಜಯ್ ಪಾಟೀಲ್ (23) ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವತಿ. ವೇಗವಾಗಿ ಬಂದ ಕಾರು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಸ್ಕೂಟಿ ಜೊತೆಗೆ ಮುಂದಿದ್ದ ಮತ್ತರೆಡು ಕಾರುಗಳಿಗೂ ಗುದ್ದಿದೆ. ಸರಣಿ ಅಪಘಾತದ ಪರಿಣಾಮ ಸ್ಕೂಟಿ ಪೀಸ್ ಪೀಸ್ ಆಗಿದ್ದು, ಮೂರೂ ಕಾರುಗಳು ಜಖಂಗೊಂಡಿದೆ.

ಗಾಯಾಳು ದಿವ್ಯಾ ಬೆಳಗಾವಿಯ ಮಜಂಗಾವ ಕಡೆಯಿಂದ ಪೀರನವಾಡಿ ಕಡೆಗೆ ಹೊರಟಿದ್ದರು. ಈ ವೇಳೆ ಕಾರು ಚಾಲಕ ಭರತ್ ಚೌಗಲೆ ಎಂಬಾತನಿಂದ ಸರಣಿ ಅಪಘಾತ ನಡೆದಿದೆ. ಸ್ಕೂಟಿ ಹಾಗೂ ಕಾರುಗಳ ನಡುವಿನ ಸರಣಿ ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ದಿವ್ಯಾ ಪಾಟೀಲ್ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!