spot_img
spot_img
spot_img
spot_img
spot_img
spot_img

ನನಗೆ ಸಹಕಾರ ಕೊಟ್ಟ ಸಿಎಂ ಹಾಗೂ ಡಿ.ಕೆ.ಶಿಗೆ ಧನ್ಯವಾದಗಳು: ಜಗದೀಶ್‌ ಶೆಟ್ಟರ್‌

Published on

spot_img

ನವದೆಹಲಿ: ಕಾಂಗ್ರೆಸ್‌ ಪಕ್ಷದಿಂದ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಮಾತನಾಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ ಅವರು ಕೂಡ ಒಳ್ಳೆಯ ರೀತಿಯಲ್ಲಿ ಗೌರವ ಸ್ಥಾನ-ಮಾನವನ್ನು ಕೊಟ್ಟಿದ್ದಾರೆ ಎಂದರು. ಇಲ್ಲಿಯವರೆಗೆ ಸಹಕಾರ ಕೊಟ್ಟಿದಕ್ಕಾಗಿ ಡಿ.ಕೆ ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಸಂದರ್ಭದಲ್ಲಿ ಜಗದೀಶ್‌ ಶೆಟ್ಟರ್‌ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇನ್ನೂ ಎಂಎಲ್‌ಸಿ ಸ್ಥಾನಕ್ಕೆ ಇ-ಮೇಲ್ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೂ ರಾಜೀನಾಮೆ ಸಲ್ಲಿಸಿದ್ದೇನೆ. 8-9 ತಿಂಗಳಿನಿಂದಲೂ ಕಾಂಗ್ರೆಸ್ಸಲ್ಲಿ ಸಾಕಷ್ಟು ಒತ್ತಡವಿತ್ತು. ಇದೀಗ ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸವಾಗಿದೆ ಎಂದು ಹೇಳಿದರು.

ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ಗೆ ಸೇರಿದ್ದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಇದೀಗ ಮತ್ತೆ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದರು. ಈ ವೇಳೆ ಹಾವೇರಿ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಂದು ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವ ಭರವಸೆಯನ್ನು ಹೈಕಮಾಂಡ್‌ ನೀಡಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!