spot_img
spot_img
spot_img
spot_img
spot_img
spot_img

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆಗೆ ಆದೇಶಿಸಿದ ಸರ್ಕಾರ

Published on

spot_img

ವಿವೇಕವಾರ್ತೆ :ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸರಸ್ವತಿ ಮೂರ್ತಿಯನ್ನು (Saraswati Idol) ಕಡ್ಡಾಯವಾಗಿ ಪ್ರತಿಷ್ಠಾಪಿಸುವಂತೆ ರಾಜಸ್ಥಾನದ (Rajasthan) ಶಿಕ್ಷಣ ಸಚಿವ ಮದನ್ ದಿಲಾವರ ಅವರು ಆದೇಶ ಹೊರಡಿಸಿದ್ದಾರೆ. ಶಾಲೆಯ ಮುಖ್ಯದ್ವಾರದಲ್ಲಿ ಈ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಸರಸ್ವತಿಯ ಭಾವಚಿತ್ರ ಅಥವಾ ಮೂರ್ತಿ ಇಲ್ಲದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೆ ಶಾಲೆಗಳಲ್ಲಿ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗುವುದು ಎಂದಿದ್ದಾರೆ. ವಿದ್ಯಾರ್ಥಿಗಳ ವಯಸ್ಸು ಮತ್ತು ಲಿಂಗವನ್ನು ಆಧರಿಸಿ ವಸ್ತ್ರ ಸಂಹಿತೆ ನಿರ್ಧರಿಸಲಾಗುತ್ತದೆ. ಇನ್ನು ಶಾಲೆಗಳಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಶಾಲೆಗಳು ಮಾತ್ರವಲ್ಲದೇ ಮದರಸಾಗಳಲ್ಲೂ ಹಿಜಾಬ್‌ ನಿಷೇಧಿಸಬೇಕು: ಸಚಿವ

ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಒತ್ತಾಯಿಸಿದ್ದಾರೆ.

ಜೈಪುರದ ಶಾಲೆಯೊಂದರಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಸ್ತ್ರ ಸಂಹಿತೆ ಜಾರಿ ಮಾಡುವಂತೆ ರಾಜಸ್ಥಾನ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗಳಿಗೆ ಬರಬೇಕು, ಈ ಮೂಲಕ ಶಿಸ್ತು ಕಲಿಯಬೇಕು. ವಸ್ತ್ರ ಸಂಹಿತೆ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ ಮತ್ತು ಅದಕ್ಕೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿದೆ ಎಂದರು.

“ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿ ಬರದೇ ‘ಪೈಜಾಮ’ ಹಾಕಿಕೊಂಡು ಬಂದರೆ ಚೆನ್ನಾಗಿ ಕಾಣಿಸುತ್ತದೆಯೇ? ಜನ ಅವರ ಮಾತು ಕೇಳುತ್ತಾರಾ? ಟೆಡ್ಡಿ, ಕ್ಯಾಪ್ ಹಾಕಿಕೊಂಡು ಬರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಈ ಹಿಂದೆ ನೋಡಿದ್ದೇವೆ. ವಸ್ತ್ರ ಸಂಹಿತೆ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ, ಸೂಚನೆಗಳನ್ನು ನೀಡಲಾಗಿದೆ ಮತ್ತು ಅವುಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ವಿವೇಕವಾರ್ತೆ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ...

Goat milk: ಮೇಕೆ ಹಾಲು ತಾಯಿ ಹಾಲಿನಷ್ಟೇ ಶ್ರೇಷ್ಠ: ನಾನಾ ಆರೋಗ್ಯ ಸಮಸ್ಯೆಗಳಿಗೆ ಇದರಲ್ಲಿದೆ ಪರಿಹಾರ..!

ಮಾರುಕಟ್ಟೆಯಲ್ಲಿ ಮೇಕೆ ಹಾಲಿಗೆ (Goat Milk) ಭಾರೀ ಡಿಮ್ಯಾಂಡ್ ಬಂದು ಬಹಳ ವರ್ಷಗಳೇ ಕಳೆಯಿತು. ಆದರೂ ಈ ಹಾಲಿನ...

ನಿಮ್ಮ ದೇಹದಲ್ಲಿ ಈ ಬದಲಾವಣೆ ಕಂಡು ಬಂದರೆ ಲಿವರ್ ಡ್ಯಾಮೇಜ್ ಎಂದರ್ಥ!

ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬಹುತೇಕ ಜನರಲ್ಲಿ ಲಿವರ್ ಸಂಬಂಧಿತ ಸಮಸ್ಯೆಗಳು ಕಂಡುಬರುತ್ತಿವೆ. ನಿಮ್ಮ...
error: Content is protected !!