ವಿವೇಕವಾರ್ತೆ : ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಗಂಡನೋರ್ವ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.
ಕೊಲೆಯಾದ ಮಹಿಳೆ ನಂದಿನಿ ಲೋಕೇಶ ನಾಯ್ಕ (30) ಎಂದು ತಿಳಿದುಬಂದಿದೆ.
ಲೋಕೇಶ ಮನೆಯಲ್ಲಿ ತನ್ನ ಪತ್ನಿಯ ಕುತ್ತಿಗೆ ಸೀಳಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದ.
ಮಹಿಳೆ ಕುತ್ತಿಗೆಗೆ ಆದ ತೀವ್ರ ಗಾಯದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಗ್ರಾಮೀಣ ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ ಕಾಯ್ಕಿಣಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ತಕ್ಷಣ ಕಾರ್ಯಾಚರಣೆ ಕೈಗೊಂಡು ಆರೋಪಿ ಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ