spot_img
spot_img
spot_img
spot_img
spot_img
spot_img

ಶೆರೆ ಕುಡಿಯಲು ಹಣ ಕೊಡದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಾಕಿದ ಪತಿ- ಕೋಮಾಗೆ ಜಾರಿದ ಪತ್ನಿ

Published on

spot_img

ದಾವಣಗೆರೆ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲು ನಿರಾಕರಿಸಿದ್ದಕ್ಕೆ ಪತಿಯೇ (Husband) ತಲೆ ಮೇಲೆ ಕಲ್ಲು ಎತ್ತಿಹಾಕಿ ಪತ್ನಿಯನ್ನ (Wife) ಹಲ್ಲೆ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ (Chitradurga)  ಜಿಲ್ಲೆ ಹಿರಿಯೂರು ತಾಲೂಕು ಇದ್ದಲ ನಾಗೇನಹಳ್ಳಿ ಗ್ರಾಮದ ಕದರಪ್ಪ (60) ಹಲ್ಲೆ ನಡೆಸಿದ ಆರೋಪಿ. ಪತಿ ಮಾಡಿರುವ ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಿಳೆ ಸಾಕಮ್ಮ (55) ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಸ್ತುತ ಅವರು ಕೋಮಾ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ದಂಪತಿ ಹಲವು ವರ್ಷಗಳಿಂದ ಬಡಗೊಲ್ಲರಹಟ್ಟಿ, ಸೀಗೆಹಟ್ಟಿ ಗ್ರಾಮದವರ ಜೊತೆಗೂಡಿ ಕುರಿಗಳನ್ನು ಮೇಯಿಸುತ್ತಿದ್ದರು. ಅದರಂತೆಯೇ ಕುರಿಗಳನ್ನು ಮೇಯಿಸಲು ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮ ಸೇರಿ ಸುತ್ತಲ ಗ್ರಾಮಗಳಲ್ಲಿ ವಾರದಿಂದ ತೋಟವೊಂದರಲ್ಲಿ ತಂಗಿದ್ದರು. ಮದ್ಯ ವ್ಯಸನಿಯಾಗಿದ್ದ ಆರೋಪಿ ಕದರಪ್ಪ, ಹಣ ನೀಡುವಂತೆ ಪತ್ನಿ ಸಾಕಮ್ಮನನ್ನು ಪದೆ ಪದೇ ಪೀಡಿಸುತ್ತಿದ್ದನು.

ಪತ್ನಿ ಹಣ ನೀಡಲು ನಿರಾಕರಿಸಿದ್ದಕ್ಕೆ ಇನ್ನಷ್ಟು ಕೋಪಗೊಂಡ ಕದರಪ್ಪ ಅಲ್ಲೇ ಇದ್ದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾಕಮ್ಮ ಅವರನ್ನು ಕಂಡ ಬಡಗೊಲ್ಲರಹಟ್ಟಿ ಮತ್ತು ಸೀಗೆಹಟ್ಟಿ ಕುರಿ ಕಾಯುವವರು ತಕ್ಷಣವೇ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾಕಮ್ಮ ಮಗ ದಯಾನಂದ ಬಸವಾಪಟ್ಟಣ ಪೊಲೀಸ್ ಠಾಣೆಗೆ ತಂದೆ ಮೇಲೆ ದೂರು ನೀಡಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಆರೋಪಿ ಕದರಪ್ಪನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!