spot_img
spot_img
spot_img
spot_img
spot_img
spot_img

ಇಂಟರ್‌ನೆಟ್‌ನಲ್ಲಿ ಹುಡುಕಿ ಪ್ಲ್ಯಾನ್- ರಿಮೂವರ್ ಕುಡಿಸಿ ಮಗು ಹತ್ಯೆಗೈದಿದ್ದ ಮಹಿಳೆ ಅರೆಸ್ಟ್

Published on

spot_img

ವಿವೇಕವಾರ್ತೆ: ಮಹಿಳೆಯೊಬ್ಬಳನ್ನು ತನ್ನ ಗೆಳೆಯನ 18 ತಿಂಗಳ ಮಗುವಿಗೆ ನೇಲ್ ಪಾಲಿಶ್ ರಿಮೂವರ್ ಹಾಗೂ ಸಣ್ಣ ಸ್ಕ್ರೂಗಳನ್ನು ತಿನ್ನಿಸಿ ಹತ್ಯೆಗೈದ ಆರೋಪದ ಮೇಲೆ ಅಮೆರಿಕದ (America) ಪೊಲೀಸರು (Police) ಬಂಧಿಸಿದ್ದಾರೆ.

ಅಲಿಸಿಯಾ ಓವೆನ್ಸ್ (20) ಎಂಬ ಮಹಿಳೆ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದು ಆಕೆಯನ್ನು ಬಂಧಿಸಲಾಗಿದೆ. ಮಹಿಳೆ 2023ರ ಜೂನ್‍ನಲ್ಲಿ ತನ್ನ ಗೆಳೆಯನ ಮಗುವಿಗೆ ನೇಲ್ ಪಾಲಿಶ್, ಸ್ಕ್ರೂ ಹಾಗೂ ಬಟನ್ ಆಕಾರದ ಬ್ಯಾಟರಿಗಳನ್ನು ತಿನ್ನಿಸಿ ಹತ್ಯೆಗೈದಿದ್ದಳು ಎಂದು ಆರೋಪಿಸಲಾಗಿದೆ.

ಮೃತಪಟ್ಟ ಮಗುವನ್ನು ಐರಿಸ್ ಎಂದು ಗುರುತಿಸಲಾಗಿದೆ. ಮಗುವಿಗೆ ಕಳೆದ ಜೂನ್‍ನಲ್ಲಿ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳ ಬಳಿಕ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿತ್ತು. ಶವಪರೀಕ್ಷೆಯ ಬಳಿಕ ಮಗುವಿನ ಹೊಟ್ಟೆಯಲ್ಲಿ ಬಟನ್ ಆಕಾರದ ಬ್ಯಾಟರಿಗಳು ಮತ್ತು ಸ್ಕ್ರೂಗಳು ಸಿಕ್ಕಿದ್ದವು. ಅಲ್ಲದೇ ನೇಲ್ ಪಾಲಿಶ್ ಕುಡಿಸಿರುವುದನ್ನು ವೈದ್ಯರು ಖಚಿತಪಡಿಸಿದ್ದರು.


ಆರೋಪಿ ಮಹಿಳೆ, ಮಕ್ಕಳಿಗೆ ವಿಷಕಾರಿಯಾದ ಸೌಂದರ್ಯವರ್ಧಕ ಮತ್ತು ಮಕ್ಕಳ ಸಾವಿಗೆ ಕಾರಣವಾಗುವ ಔಷಧಿಗಳ ಬಗ್ಗೆ ಇಂಟರ್‍ನೆಟ್‍ನಲ್ಲಿ ಹುಡುಕಾಡಿದ್ದಳು ಎಂದು ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!