Saturday, September 30, 2023

ಪಡಿತರ ಚೀಟಿ ತಿದ್ದುಪಡಿಗೆ ಇನ್ಮುಂದೆ ಅವಕಾಶವೇ ಇಲ್ಲ..? ಜಾರಿಯಾಯ್ತು ಸರಕಾರದ ಹೊಸ ಆದೇಶ..!

ವಿವೇಕವಾರ್ತೆ : ಕರ್ನಾಟಕ ರಾಜ್ಯ ಸರಕಾರ (Karnataka Governament ) ಜನರಿಗೆ ಸರಕಾರಿ ಯೋಜನೆಗಳ (Karnataka Governament Schemes ) ಲಾಭ ದೊರಕಬೇಕು ಅನ್ನೋ ಕಾರಣಕ್ಕೆ ಪಡಿತರ ಚೀಟಿ ತಿದ್ದುಪಡಿಗೆ (Ration Card Updates) ಅವಕಾಶ ಕಲ್ಪಿಸಿತ್ತು. ಆದ್ರೆ ಸರಕಾರದ ಗಡುವು ಈಗಾಗಲೇ ಮುಗಿದಿದ್ದು, ಇನ್ನು ಮುಂದೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವಿಲ್ಲ.

ಗೃಹಲಕ್ಷ್ಮೀ (Gruha Lakshmi) , ಗೃಹಜ್ಯೋತಿ (Gruha Jyothi) , ಅನ್ನಭಾಗ್ಯ (Anna Bhagya Scheme) ಸೇರಿದಂತೆ ಸರಕಾರ ಸವಲತ್ತುಗಳನ್ನು ಪಡೆಯಲು ಪಡಿತರ ಚೀಟಿ ಪ್ರಮುಖ ದಾಖಲೆಯಾಗಿದೆ.

ಪಡಿತರ ಚೀಟಿಯಲ್ಲಿನ ಲೋಪದೋಷಗಳಿಂದಾಗಿ ಕರ್ನಾಟಕದಲ್ಲಿ ಸರಕಾರಿ ಸವಲತ್ತು ದೊರಕದ ಕುಟುಂಬಗಳಿಗೆ ಸರಕಾರ ಅನುಕೂಲ ಕಲ್ಪಿಸಿತ್ತು. ಸೆಪ್ಟೆಂಬರ್‌ 1 ರಿಂದ 10 ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದ್ರೆ ಜನರಿಂದ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ ೧೪ರ ವರೆಗೂ ಕೂಡ ತಿದ್ದುಪಡಿ ಅವಧಿಯನ್ನು ವಿಸ್ತರಣೆ ಮಾಡಿತ್ತು. ಆದ್ರೀಗ ಸರಕಾರ ನೀಡಿದ್ದ ಅವಧಿ ಮುಕ್ತಾಯಗೊಂಡಿದೆ.

ರೇಷನ್‌ ಕಾರ್ಡ್‌ಗೆ ಹೊಸದಾಗಿ ಕುಟುಂಬ ಸದಸ್ಯರ ಹೆಸರು ನೋಂದಣಿ, ಹೆಸರನ್ನು ತೆಗೆಯುವುದು, ಸದಸ್ಯರ ಹೆಸರಿನ ತಿದ್ದುಪಡಿ, ವಿಳಾಸ ಸೇರಿದಂತೆ ಹಲವು ರೀತಿಯ ತಿದ್ದುಪಡಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಎರಡು ಲಕ್ಷಕ್ಕೂ ಅಧಿಕ ಮಂದಿ ಸರಕಾರ ನೀಡಿರುವ ಅವಧಿಯಲ್ಲಿ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಿಕೊಂಡಿದ್ದರು.

ಆದರೆ ಹಲವರು ಇನ್ನೂ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಂಡಿಲ್ಲ. ಇಂತಹವರಿಗೆ ಸದ್ಯಕ್ಕಂತೂ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವಿಲ್ಲ. ಅದ್ರಲ್ಲೂ ಈ ಬಾರಿ ಸರ್ವರ್‌ ಸಮಸ್ಯೆಯಿಂದಲೇ ಬಹುತೇಕರಿಗೆ ರೇಷನ್‌ ಕಾರ್ಡ್‌ ತಿದ್ದುಪಡಿ ಮಾಡಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಜನರು ಮತ್ತೊಮ್ಮೆ ಅವಕಾಶ ನೀಡುವಂತೆ ಸರಕಾರವನ್ನು ಒತ್ತಾಯಿಸುತ್ತಿದ್ದಾರೆ.

ಗ್ರಾಮೀಣ ಹಾಗೂ ನಗರ ಭಾಗದಲ್ಲಿನ ಬಹುತೇಕ ಕಡೆಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಸರ್ವ ಸಮಸ್ಯೆ ಸರ್ವೇ ಸಾಮಾನ್ಯವಾಗಿತ್ತು. ಕೆಲವೊಂದು ಜನರು ಪಡಿತರ ಚೀಟಿ ತಿದ್ದುಪಡಿಗಾಗಿ ಮೂರ್ನಾಲ್ಕು ದಿನಗಳ ಕಾಲ ಕಾದರೂ ಪ್ರಯೋಜನವಾಗಿರಲಿಲ್ಲ. ಪಡಿತರ ಚೀಟಿ ತಿದ್ದುಪಡಿ ಮಾಡದೆ ರಾಜ್ಯ ಸರಕಾರ ಘೋಷಣೆ ಮಾಡಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಿಂದ ೨೦೦೦ ರೂಪಾಯಿ ಪಡೆಯಲು ಸಾಧ್ಯವಾಗುವುದಿಲ್ಲ.

ಈಗಾಗಲೇ ಸರಕಾರ ಪಡಿತರ ಚೀಟಿ ತಿದ್ದುಪಡಿಗೆ ನೀಡಿರುವ ಅವಕಾಶ ಸಂಪೂರ್ಣವಾಗಿ ಮುಗಿದಿದೆ. ಆದರೆ ಸದ್ಯಕ್ಕೆ ಸರಕಾರ ಅವಧಿಯನ್ನು ವಿಸ್ತರಣೆ ಮಾಡುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಆದರೆ ಗೃಹಲಕ್ಷ್ಮೀ ಯೋಜನೆಗೆ ಅಧಿಕ ಸಂಖ್ಯೆಯಲ್ಲಿ ಸೇರ್ಪಡೆಗೆ ಬಾಕಿ ಉಳಿದಿದೆ.

ಪ್ರಮುಖವಾಗಿ ಗೃಹಲಕ್ಷ್ಮೀ ಯೋಜನೆಗೆ ಕೋಟ್ಯಾಂತರ ಮಹಿಳೆಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಆದರೆ ರೇಷನ್‌ ಕಾರ್ಡ್ ನಲ್ಲಿ ಮನೆಯ ಯಜಮಾನಿ ಮಹಿಳೆ ಆಗಿದ್ದರೆ ಮಾತ್ರವೇ ಅಂತಹ ಕುಟುಂಬಳಿಗೆ ಪ್ರತೀ ತಿಂಗಳು 2000 ರೂಪಾಯಿ ಲಭಿಸಲಿದೆ. ಆದರೆ ಬಹುತೇಕ ಕುಟುಂಬಗಳಲ್ಲಿನ ಕಾರ್ಡ್‌ಗಳಲ್ಲಿ ಮನೆಯ ಯಜಮಾನ ಗಂಡಸು ಆಗಿದ್ದಾರೆ. ಹೀಗಾಗಿ ಅಂತಹ ಅರ್ಜಿದಾರರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬ್ಯಾಂಕ್‌ ಖಾತೆಗೆ ಜಮೆ ಆಗಿರಲಿಲ್ಲ. ಇದೇ ಕಾರಣಕ್ಕೆ ಸರಕಾರ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡಿತ್ತು.

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್ : ಲೈಕ್, ಶೇರ್ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ.!

ವಿವೇಕವಾರ್ತೆ : ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಶಾಲೆಗಳಲ್ಲಿ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿದ್ಯಾರ್ಥಿಗಳಿಗೆ ತಮ್ಮ ಚಾನೆಲ್ ಗೆ Subscribers ಆಗಿ ತಮ್ಮ ವಿಡಿಯೋಗಳನ್ನು ಇತರರಿಗೆ...

ಲೋಕಸಭೆ ಬಿಜೆಪಿ ಟಿಕೆಟ್ ಸಿಗುವ ಭರವಸೆ ಇದೆ – ರಮೇಶ್ ಕತ್ತಿ

ವಿವೇಕವಾರ್ತೆ : ಈ ಬಾರಿ ಲೋಕಸಭೆ ಚುನಾವಣೆಗೆ ತಮಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ಹೇಳಿದ್ದಾರೆ. ಅವರು ಇಂದು ಚಿಕ್ಕೋಡಿಯ ನಂದಗಾಂವ ಗ್ರಾಮದಲ್ಲಿ...

ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ.!

ವಿವೇಕವಾರ್ತೆ : ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯಯೊಬ್ಬರು ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ಇಂದು (ಸೆ.29) ನಡೆದಿದೆ. ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾI ಸಿಂದುಜಾ (28)...

ರೀಲ್ಸ್ ಮಾಡಿ ಟ್ರೋಲ್ ಆದ ಮಹಿಳಾ ಪೊಲೀಸ್ ; ವಿಡಿಯೋ ವೈರಲ್.!

ವಿವೇಕವಾರ್ತೆ : ಮಹಿಳೆ ಪೊಲೀಸ್​​​ ರೀಲ್ಸ್​​ ಮಾಡಲು ಹೋಗಿ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾದ ಘಟನೆಯೊಂದು ಪಂಜಾಬನಲ್ಲಿ ನಡೆದಿದೆ. ಪೊಲೀಸರು ರೀಲ್ಸ್​​ ಮಾಡಬಾರದು ಎಂದು ಇಲ್ಲಾ, ಆದರೆ ಅವರು ಸಮಾಜದ ಒಳಿತನ್ನು ಕಾಪಾಡುವ...
error: Content is protected !!