ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಸಹೋದರಿಯರು

Published on

spot_img
spot_img

ಜೈಪುರ್: ಕಿಡಿಗೇಡಿಗಳ ಕಿರುಕುಳದಿಂದ ಬೇಸತ್ತು ಇಬ್ಬರು ಅಪ್ರಾಪ್ತ ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ (Rajasthan) ಪ್ರತಾಪಗಡದಲ್ಲಿ ನಡೆದಿದೆ.

ಬಾಲಕಿಯರು ಹಾಸ್ಟೆಲ್‍ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದರು. ಇವರಿಗೆ ಅಪ್ರಾಪ್ತ ಸೇರಿದಂತೆ ಮೂವರು ಯುವಕರು ಕಿರುಕುಳ ನೀಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯರು ವಿಷ ಸೇವಿಸಿದ ವಿಚಾರ ತಿಳಿದ ಬಳಿಕ ಅವರನ್ನು ಅಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ವೈದ್ಯರು ಈ ವೇಳೆ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಬಳಿಕ ಬಾಲಕಿಯರ ತಂದೆ ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ವಿಚಾರವಾಗಿ ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಅಶೋಕ್ ಗೆಹ್ಲೋಟ್ ಅವರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ರಾಜ್ಯದ ಕಳಪೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಸೂಚಿಸುತ್ತದೆ ಎಂದು ಹೇಳಿಕೊಂಡಿದ್ದಾರೆ.

ಅಲ್ಲದೇ ಅವರು ‘ಎಕ್ಸ್’ ಖಾತೆಯಲ್ಲಿ ಕಾಂಗ್ರೆಸ್‍ನ ಜಂಗಲ್ ರಾಜ್‍ನಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಉತ್ತುಂಗದಲ್ಲಿದೆ. ಈ ಘಟನೆ ನಾಚಿಕೆಗೇಡಿನ ಸಂಗತಿಯಾಗಿದೆ. ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬರೆದುಕೊಂಡಿದ್ದಾರೆ.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!