spot_img
spot_img
spot_img
spot_img
spot_img
spot_img

ವರ್ತೂರು ಸಂತೋಷ್ ಗೆ ಸನ್ಮಾನ:  ಪೊಲೀಸ್ ಅಧಿಕಾರಿ ಎತ್ತಂಗಡಿ

Published on

spot_img

ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ವರ್ತೂರು ಸಂತೋಷ್ ಗೆ ಅಭಿಮಾನಿಗಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಗಿದೆ. ಇದೀಗ ವರ್ತೂರು ಸಂತೋಷ್ ಅವರನ್ನು ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ತಿಮ್ಮರಾಯಪ್ಪ ಅವರನ್ನು ವರ್ತೂರು ಠಾಣೆಯಿಂದ ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ವರ್ತೂರು ಸಂತೋಷ್ ಮನೆಗೆ ತೆರಳಿದ್ದ ತಿಮ್ಮರಾಯಪ್ಪ ಈ ವೇಳೆ ಸಂತೋಷ್ ಸನ್ಮಾನ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಎಸ್ಐ ತಿಮ್ಮರಾಯಪ್ಪ ಜೊತೆ ಠಾಣೆಯ ಸಿಬ್ಬಂದಿ ಕೂಡ ಈ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತೀಚಿಗೆ ಕೆಲ ತಿಂಗಳ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದಿದ್ದ.

ಹುಲಿ ಉಗುರಿನ ಪೆಂಡೆಟ್ ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಮನೆಯಲ್ಲಿದ್ದ ವೇಳೆ ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದಿದ್ದರು. ಇದೆಲ್ಲಾ ಗೊತ್ತಿದ್ದರು ಪೊಲೀಸರು ಸಂತೋಷ್ ಅವರನ್ನು ಸನ್ಮಾನಿಸಿದ್ದು ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಸಂತೋಷ್ ಅವರನ್ನು ಸನ್ಮಾನ ಮಾಡಿದ್ದ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!