ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

Published on

spot_img
spot_img

ತುಮಕೂರು ಜಿಲ್ಲೆ ತಿಪಟೂರು ನಗರದ ಹುಳಿಯಾರು ರಸ್ತೆಯ ಪಕ್ಕದಲ್ಲಿರುವ ಮಂಜುನಾಥ್ ನಗರದಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಜನರಲ್ಲಿನ ಮೂಢನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ಆರೋಪಿಗಳು, ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ.

ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮೂವರನ್ನೂ ಬಂಧಿಸಿ, ಹಾವನ್ನು ವಶಕ್ಕೆ ಪಡೆದಿದ್ದಾರೆ.

ನಾಗರಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಕಾಂತರಾಜು ಹಾಗೂ ಸಹಚರರಾದ ಚಿಕ್ಕನಾಯಕನಹಳ್ಳಿ ತಾಲೂಕಿನ ಯಗಚೀಹಳ್ಳಿ ಗ್ರಾಮದ ಶೇಕ್​ ಹುಸೇನ್​, ಮೊಹ್ಮದ್​ ಆರೀಫ್​ ಎಂಬುವವರನ್ನು ಸೋಮವಾರ ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್​ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎಸಿಎಫ್​ ಸುಬ್ಬರಾವ್​ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್​ಎಫ್​ಒ ಜಗದೀಶ್​, ಡಿಆರ್​ಎಫ್​ಒ ಶಿವಕುಮಾರ್​, ಸಿಬ್ಬಂದಿ ತೇಜಸ್​ ಕುಮಾರ್​, ಚೌಡಪ್ಪ, ಚಾಲಕ ಮಂಜುನಾಥ್​, ಅರುಣ್​ ಕುಮಾರ್​, ದಿವಾಕರ್​ ಇದ್ದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!