spot_img
spot_img
spot_img
spot_img
spot_img

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಅಣ್ಣ ತಮ್ಮಂದಿರರ ಜಗಳ ಕೊಲೆಯಲ್ಲಿ ಅಂತ್ಯ!

Published on

spot_img

ಹಾವೇರಿ:- ಹಾವೇರಿಯಲ್ಲಿ ಅಣ್ಣ ತಮ್ಮಂದಿರು ಜಮೀನಿಗೆ ನೀರು ಹಾಯಿಸುವ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ

ಒಂದು ಕ್ಷಣದ ಸಿಟ್ಟು ಅದೆಂಹತ ಅನಾಹುತಕ್ಕೆ ಸಾಕ್ಷಿಯಾಗುತ್ತೆ ಅನ್ನುವುದಕ್ಕೆ ಈ ಘಟನೆ ಸಾಕ್ಷಿ. ಇಲ್ಲಿ ಹೆಣವಾದ ವ್ಯಕ್ತಿಯ ಹೆಸರು ನಾಗಪ್ಪ ಬೆನಕನಹಳ್ಳಿ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಿಗಿ ಗ್ರಾಮದ ನಿವಾಸಿ. ಇವರು ಐದು ಜನ ಅಣ್ಣ ತಮ್ಮಂದಿರು ಎಲ್ಲರೂ ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದರು. ಎಲ್ಲರಿಗೂ ಮೂರು ಎಕರೆ ಜಮೀನು ಬಂದಿತ್ತು. ಅದರಲ್ಲಿ ಎಲ್ಲರೂ ಒಂದೊಂದು ಕೊಳವೆ ಬಾವಿ ಕೊರೆಸಿಕೊಂಡು ಜಮೀನು ಉಳುಮೆ ಮಾಡುತ್ತಿದ್ದರು.

ಆದರೆ ಫೋಟೋದಲ್ಲಿ ಕಾಣುತ್ತಿರುವ ವ್ಯಕ್ತಿ ಮೃತ ನಾಗಪ್ಪನ ತಮ್ಮ ಯಲ್ಲಪ್ಪ ತನ್ನ ಕೊಳವೆ ಬಾವಿಯಲ್ಲಿ ನೀರು ಕಡಿಮೇ ಆಗಿದಕ್ಕೆ ಅಣ್ಣನ ಜಮೀನಲ್ಲಿದ್ದ ನೀರು ಕದ್ದುಮುಚ್ಚಿ ಹಾಯಿಸಿಕೊಳ್ಳುತ್ತಿದ್ದನಂತೆ. ಇದನ್ನು ಪ್ರಶ್ನೆ ಮಾಡಿದ ಅಣ್ಣನನ್ನ ಕಟ್ಟಿಗೆಯಿಂದ ಕೊಡೆದು ಕೊಲೆ ಮಾಡಿದ್ದಾನೆ ಎಂದು ಮೃತನ ಹೆಂಡತಿ ಆರೋಪ ಮಾಡುತ್ತಿದ್ದಾರೆ.

ಒಂದಡೆ ಬರಗಾಲ, ಮತ್ತೊಂದೆಡೆ ವಿದ್ಯುತ್ ಕಣ್ಣಾಮುಚ್ಚಾಲೆ ಆಟ. ಹೀಗಾಗಿ ರೈತರು ತಮ್ಮ ಜಮೀನಿನಲ್ಲಿ ಬೆಳದ ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಾರೆ. ನಿನ್ನೆ ಸೋಮವಾರ ಸಂಜೆ ಯಲ್ಲಪ್ಪನನ್ನು ಅಣ್ಣ ನಾಗಪ್ಪ ಪ್ರಶ್ನೆ ಮಾಡಿದ್ದಾನೆ. ಅದಕ್ಕೆ ಸಬೂಬು ನೀಡಿ ಸಮಾಧಾನ ಮಾಡಬೇಕಾಗಿದ್ದ ತಮ್ಮ, ಅಣ್ಣನಿಗೆ ಕಟ್ಟಿಗೆಯಿಂದ ಎದೆಗೆ ಹೊಡೆದಿದ್ದಾನೆ.

ಹೊಡೆದ ರಭಸಕ್ಕೆ 62 ವರ್ಷದ ನಾಗಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಆ ಕೂಡಲೇ ಆಸ್ಪತ್ರೆಗೆ ರವಾನಿಸಿದರೂ ಮಾರ್ಗ ಮಧ್ಯದಲ್ಲೆ ಸಾವನಪ್ಪಿದ್ದಾನೆ. ಇತ್ತ ಕೊಲೆ ಆರೋಪಿ ಯಲ್ಲಪ್ಪನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೊಲೆ ಆರೋಪಿಗೆ ಶಿಕ್ಷೆಯಾಗಬೇಕು ಎಂದು ಸಂಬಂಧಿಕರು ಒತ್ತಾಯಿಸುತ್ತಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!