ದೆಹಲಿ ಐಐಟಿ ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ

Published on

spot_img
spot_img

ವಿವೇಕವಾರ್ತೆ: ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿನ (IIT) ವಾಶ್ ರೂಂನಲ್ಲಿ (Washroom) ವಿದ್ಯಾರ್ಥಿನಿಯರ ವೀಡಿಯೋ (Video) ಮಾಡಿರುವ ಆರೋಪದ ಮೇಲೆ 20 ವರ್ಷದ ಸ್ವೀಪರ್‌ನನ್ನು ಬಂಧಿಸಲಾಗಿದೆ.

ದೆಹಲಿ ವಿಶ್ವವಿದ್ಯಾಲಯದ ಭಾರ್ತಿ ಕಾಲೇಜಿನ ಸುಮಾರು 10 ವಿದ್ಯಾರ್ಥಿನಿಯರು ಕಾಲೇಜಿನ ಫೆಸ್ಟ್ ಸಮಯದಲ್ಲಿ ಫ್ಯಾಷನ್ ಶೋಗಾಗಿ ವಾಶ್ ರೂಂನಲ್ಲಿ ಬಟ್ಟೆ ಬದಲಾಯಿಸುತ್ತಿದ್ದ ಸಂದರ್ಭದಲ್ಲಿ ರಹಸ್ಯವಾಗಿ ತಮ್ಮ ವೀಡಿಯೋ ಮಾಡಿರುವುದಾಗಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ಕಾಲೇಜು ಆಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿದ ಬಳಿಕವೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ನಂತರ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಸಿ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.

ಐಐಟಿ ದೆಹಲಿಯ ವಾಶ್ ರೂಂನಲ್ಲಿ ಹುಡುಗನೊಬ್ಬ ವೀಡಿಯೋ ಮಾಡಿರುವ ಬಗ್ಗೆ ಕಿಶನ್‌ಗಢ ಪೊಲೀಸ್ ಠಾಣೆಯಲ್ಲಿ ಎಕ್ಸ್ ಮೂಲಕ ದೂರನ್ನು ಸ್ವೀಕರಿಸಿದ್ದೇವೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 354 ಸಿ ಅಡಿಯಲ್ಲಿ ಶನಿವಾರ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!