Tuesday, September 26, 2023

ವೀಕ್ ಎಂಡ್ ವಿಥ್ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಲೀಸ್ಟ್ ಇಲ್ಲಿದೆ!!

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಈ ಬಾರಿ ಹಲವು ಕಾರಣಗಳಿಂದ ಸುದ್ದಿ ಪಡೆದುಕೊಂಡಿದೆ. ರಮ್ಯಾ ಅವರ ಎಪಿಸೋಡ್ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಪ್ರಭುದೇವ ಅವರ ನಂತರ ಭಾಗವಹಿಸುವ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ.

1) ಧ್ರುವ ಸರ್ಜಾ : ಪ್ರಭುದೇವ ಅವರ ಎಪಿಸೋಡ್ ಮುಗಿಯುತ್ತಿದ್ದಂತೆ ಧ್ರುವ ಸರ್ಜಾ ಅವರು ಕಾರ್ಯಕ್ರಮದ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಚಿರಂಜೀವಿ ಸರ್ಜಾ ಅವರ ಸಹೋದರನಾದ ಧ್ರುವ ಸರ್ಜಾ ಅವರು ಈಗಾಗಲೇ ಅನೇಕ ಸಿನಿಮಾಗಳಲ್ಲಿ ನಟಿಸಿ ಅವರದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅರ್ಹವಾಗಿಯೇ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾಣಿಸಿಕೊಳ್ಳದಿದ್ದರೆ.

ಬಹದ್ದೂರ್ ಪೊಗರು ಭರ್ಜರಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆದ ಖ್ಯಾತಿ ಧ್ರುವ ಸರ್ಜಾ ಅವರದು. ಅವರ ಮಾರ್ಟಿನ್ ಚಿತ್ರ ಟ್ರೈಲರ್ ಬಿಡುಗಡೆಯಾಗುತ್ತಿದ್ದಂತೆ ಹೊಸ ಸಂಚಲನ ಸೃಷ್ಟಿಸಿದೆ. ಇದೊಂದು ಪಾನ್ ಇಂಡಿಯಾ ಸಿನಿಮಾ ಅಗಲಿದ್ದು ಧ್ರುವ ಸರ್ಜಾ ಅವರ ಕಿರಿಯ ಸಿನಿಮಾ ಅನ್ನಿಸಿಕೊಂಡಿದೆ. ಧ್ರುವ ಸರ್ಜಾ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಅವರ ಅಣ್ಣನ ಬಗ್ಗೆ ಏನನ್ನು ಹೇಳಲಿದ್ದಾರೆ ಎನ್ನುವುದು ಅನೇಕರ ಕುತೂಹಲ. ಅದಲ್ಲದೇ ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಕೂಡ ಅಭಿಮಾನಿಗಳು ಸಾಕಷ್ಟು ಕಾತುರದಿಂದ ಕಾಯುತ್ತಿದ್ದಾರೆ.

2) ಮಾಲಾಶ್ರೀ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ನಾಲ್ಕನೇ ಅತಿಥಿಯಾಗಿ ಮಾಲಾಶ್ರೀ ಅವರು ಪಾಲ್ಗೊಳ್ಳಲಿದ್ದಾರೆ. ಒಂದು ಕಾಲದಲ್ಲಿ ಕನಸಿನ ರಾಣಿಯಾಗಿ ಕನ್ನಡ ಚಿತ್ರರಂಗದಲ್ಲಿ ನಾಯಕರಿಗಿಂತ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದರು ಮಾಲಾಶ್ರೀ ಅವರು. ವಯಸ್ಸು ಆಗುತ್ತಿದ್ದಂತೆ ಇವರು ನಾಯಕಿ ನಟಿಯಾಗಿ ಹಾಗೂ ಆಕ್ಷನ್ ಚಿತ್ರಗಳಲ್ಲಿ ಅಭಿನಯಿಸಲು ಪ್ರಾರಂಭಿಸಿದರು. ಇವರಿಗೆ ಕನ್ನಡದ ವಿಜಯಶಾಂತಿ ಎನ್ನುವ ಬಿರುದು ಕೂಡ ಇದೆ. ಕರುಣ ಕರಣದಿಂದ ಪತಿರಾಮು ಅವರ ಆಕಸ್ಮಿಕ ಅಗಲುವಿಕೆಯಿಂದ ಇವರು ಸಾಕಷ್ಟು ದುಃಖಿತರಾಗಿದ್ದರು. ನಂತರದ ಬದುಕನ್ನು ಹೇಗೆ ಎದುರಿಸಿದರು ಎನ್ನುವುದರ ಬಗ್ಗೆ ಕಾರ್ಯಕ್ರಮದಲ್ಲಿ ವಿವರಿಸಬಹುದು ಎನ್ನುವ ನಿರೀಕ್ಷೆ ಇದೆ.

4) ರಚಿತಾ ರಾಮ್ ಬುಲ್ ಬುಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಚಿತಾ ರಾಮ್ ಈಗ ಬಿಡುವಿಲ್ಲದ ನಟಿಯಾಗಿದ್ದಾರೆ. ಅವರು ಕೂಡ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

5) ಸದ್ಗುರು ಸದ್ಗುರು ಎಂದು ಖ್ಯಾತಿ ಪಡೆದಿರುವ ಜಗದೀಶ್ ವಾಸುದೇವ್ ಅವರು ಕೂಡ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ವಿಶ್ವದ ಎಲ್ಲೆಡೆ ಆಧ್ಯಾತ್ಮಿಕ ಪ್ರವಚನ ನೀಡಿರುವ ಸದ್ಗುರು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ತಮಿಳುನಾಡಿನ ಕೊಯಮುತ್ತೂರಿನಲ್ಲಿ ಅವರು ಇಶಾವಾಸು ಫೌಂಡೇಶನ್ ಅನ್ನು ಸ್ಥಾಪಿಸಿದ್ದಾರೆ.

RELATED ARTICLES

ರಿಷಬ್ ಬಾಲಿವುಡ್‌ ಎಂಟ್ರಿ ಫಿಕ್ಸ್: ನಿರ್ದೇಶಕರು ಯಾರು? ಕಥೆ ಏನು? ಇಲ್ಲಿದೆ ಡಿಟೈಲ್ಸ್

ವಿವೇಕವಾರ್ತೆ : 'ಕಾಂತಾರ' ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಪಟ್ಟಕ್ಕೇರಿದ ರಿಷಬ್ ಶೆಟ್ಟಿ ಈಗ ಬಾಲಿವುಡ್‌ಗೆ ಪಾದಾರ್ಪಣೆ ಕೊಡುತ್ತಿದ್ದಾರೆ. ಸದ್ಯ 'ಕಾಂತಾರ' ಸಿನಿಮಾದಲ್ಲಿ ಡಿವೈನ್ ಸ್ಟಾರ್ ಬ್ಯುಸಿಯಾಗಿದ್ದು ಆ ಬಳಿಕ ಹಿಂದಿ...

ʻಟೋಬಿʼ ಚೆನ್ನಾಗಿಲ್ಲ ಅಂದಿದ್ದಕ್ಕೆ ಮಹಿಳೆಗೆ ಅವಾಚ್ಯ ನಿಂದನೆ ; ವ್ಯಕ್ತಿಯ ವಿರುದ್ಧ ನೆಟ್ಟಿಗರ ಆಕ್ರೋಶ.!

ವಿವೇಕ ವಾರ್ತೆ : ರಾಜ್‌ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿನ್ನೆ (ಅ.25) ಬಿಡುಗಡೆಗೊಂಡಿದ್ದು, ಕೆಲವರು ಸಿನಿಮಾವನ್ನು ಹೊಗಳಿದರೆ ಇನ್ನು ಕೆಲವರು ಚಿತ್ರ ನಿರೀಕ್ಷಿಸಿದ ಮಟ್ಟಕ್ಕೆ ಇಲ್ಲ‌. ಒಮ್ಮೆ ನೋಡಬಹುದು ಎಂದು...

ಅತ್ಯಾಚಾರ, ಬ್ಲ್ಯಾಕ್‌ಮೇಲ್: ಕನ್ನಡದ ಖ್ಯಾತ ನಟ ಬಂಧನ

ವಿವೇಕವಾರ್ತೆ : ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಅದರ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪದಡಿ ಸಿನಿಮಾ ನಟ ವೀರೇಂದ್ರ ಬಾಬುನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!