spot_img
spot_img
spot_img
spot_img
spot_img

ವಾಕಿಂಗ್ ಮಾಡೋದ್ರಿಂದ ಸಿಗುವ ಬೆನಿಫಿಟ್ ಗಳೇನು!? – ತಜ್ಞರು ಹೇಳಿದಿಷ್ಟು!

Published on

spot_img

ನಾವಿಡುವ ಪ್ರತಿ ಹೆಜ್ಜೆಯೂ ನಮ್ಮನ್ನು ಆರೋಗ್ಯಕರ ದೇಹ ಮತ್ತು ಮನಸ್ಸಿನ ಕಡೆಗೆ ಚಲಿಸಲು ಸಹಾಯ ಮಾಡುತ್ತದೆ. ತಂತ್ರಜ್ಞಾನವು ನಮ್ಮ ಜಗತ್ತನ್ನು ಆಕ್ರಮಿಸಿಕೊಂಡಿರುವುದರಿಂದ ಮತ್ತು ಎಲ್ಲವೂ ಮನೆ ಬಾಗಿಲಲ್ಲಿ ಲಭ್ಯವಿರುವುದರಿಂದ ನಾವು ನಡೆಯುವುದೇ ಕಡಿಮೆಯಾಗಿದೆ. ಇದರಿಂದ ಹೃದಯರಕ್ತನಾಳದ ಕಾಯಿಲೆ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕೀಲು ನೋವುಗಳಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

ನೀವು ದಿನವೂ ಎಷ್ಟು ಸಮಯ ವಾಕ್ ಮಾಡಬೇಕೆಂಬುದನ್ನು ಮೊದಲೇ ನಿರ್ಧರಿಸಿಕೊಳ್ಳಿ. ದಿನವೂ ನಿಮ್ಮ ನಡಿಗೆಯ ಸಮಯವನ್ನು ಸ್ವಲ್ಪ ಸ್ವಲ್ಪವೇ ಹೆಚ್ಚಿಸಿ. ಇದರಿಂದ ನಿಮ್ಮ ದೇಹ ವಾಕಿಂಗ್​ಗೆ ಹೊಂದಿಕೊಳ್ಳಲು ಸಹಾಯಕವಾಗುತ್ತದೆ.

ನಿಮ್ಮ ದೈನಂದಿನ ದಿನಚರಿಯಲ್ಲಿ ಆಗಾಗ ಸ್ವಲ್ಪ ಸ್ವಲ್ಪ ನಡೆಯುವುದನ್ನು ರೂಢಿಸಿಕೊಳ್ಳಿ. ದೀರ್ಘ ಕಾಲದವರೆಗೆ ಕುಳಿತಿರುವುದರ ಬದಲು ಆಚೀಚೆ ಓಡಾಡುತ್ತಿರಿ.

– ಪೆಡೋಮೀಟರ್ ಅಥವಾ ಫಿಟ್‌ನೆಸ್ ಟ್ರ್ಯಾಕರ್ ಮೂಲಕ ನೀವು ದಿನವೂ ಎಷ್ಟು ನಡೆದಿದ್ದೀರೆಂದು ಟ್ರ್ಯಾಕ್ ಮಾಡಿ. ಇದರಿಂದ ಮರುದಿನ ಹೆಚ್ಚು ನಡೆಯಲು ನಿಮಗೆ ಪ್ರೇರಣೆ ಸಿಗುತ್ತದೆ.

– ಸಾಧ್ಯವಾದಾಗಲೆಲ್ಲಾ ಲಿಫ್ಟ್‌ಗಳ ಬದಲಿಗೆ ಮೆಟ್ಟಿಲುಗಳ ಮೂಲಕ ಹತ್ತಿ, ಇಳಿಯಲು ಅಭ್ಯಾಸ ಮಾಡಿ. ಮೆಟ್ಟಿಲುಗಳನ್ನು ಹತ್ತುವುದರಿಂದ ನಿಮ್ಮ ದೇಹದ ಹಲವು ಅಂಗಗಳಿಗೆ ವ್ಯಾಯಾಮ ಸಿಗುತ್ತದೆ.

ವಾಕಿಂಗ್​ಗೆ ಸಮಯ ಮೀಸಲಿಡಲು ಸಾಧ್ಯವಾಗದಿದ್ದರೆ ಫೋನ್​ನಲ್ಲಿ ಮಾತನಾಡುವಾಗ ನಡೆಯುತ್ತಾ ಮಾತನಾಡಿ. ಮನೆಯಲ್ಲಾಗಲಿ ಅಥವಾ ಕೆಲಸದಲ್ಲಾಗಲಿ ಫೋನ್‌ನಲ್ಲಿರುವಾಗ ವೇಗವಾಗಿ ನಡೆಯಿರಿ.

ನಿಮ್ಮ ದೈನಂದಿನ ವೇಳಾಪಟ್ಟಿಯಲ್ಲಿ ವಾಕಿಂಗ್​ಗೂ ಜಾಗವಿರಲಿ. ಬೆಳಗ್ಗೆ ಅಥವಾ ಸಂಜೆ ಅಥವಾ ಮಧ್ಯಾಹ್ನ ಊಟದ ಬಳಿಕ ವಾಕ್ ಮಾಡಲು ಮರೆಯದಿರಿ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!