spot_img
spot_img
spot_img
spot_img
spot_img
spot_img

ನಟ ಯಶ್ ಜನ್ಮದಿನದಂದೇ ಅವಘಡಗಳು ಸಂಭವಿಸುವುದ್ಯಾಕೆ: ಈ ಹಿಂದೆ ಕೂಡ ಎಲ್ಲಿ ನಡೆದಿತ್ತು ಗೊತ್ತಾ?

Published on

spot_img

ಚಿತ್ರ ನಟ ಯಶ್​ ಜನ್ಮದಿನದ ಹಿನ್ನಲೆ ಅವರ ಬ್ಯಾನರ್​ ಕಟ್ಟುವಾಗ ಮೂವರು ಅಭಿಮಾನಿಗಳು ದಾರುಣ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೊರಣಗಿ ಗ್ರಾಮದಲ್ಲಿ ನಡೆದಿದೆ.

ಹನಮಂತ ಹರಿಜನ, ಮುರಳಿ ನಡವಿನಮನಿ, ನವೀನ್ ಗಾಜಿ ಮೃತ ಯುವಕರು. ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಎಲ್ಲರೂ ಸೂರಣಗಿ ಗ್ರಾಮದವರು.

ಯಶ್‌ ಅವರ ಜನ್ಮದಿನಕ್ಕೆ ಶುಭಾಶಯ ಕೋರುವ ಬ್ಯಾನರ್‌ ಅನ್ನು ಹಸಿ ನೀಲಗಿರಿ ಕಟ್ಟಿಗೆಗೆ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದು ಅವಘಡ ಸಂಭವಿಸಿದೆ. ಈ ಅವಘಡ ಯುವಕರ ಸಾವಿಗೆ ಕಾರಣವಾಗಿದೆ. ಘಟನೆ ಸಂಬಂಧ ಲಕ್ಷ್ಮೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟ ಯಶ್ ಜನ್ಮದಿನದಂದು ಈ ಹಿಂದೆಯೂ ಅವಘಡಗಳು ಸಂಭವಿಸಿದ್ದವು, 2018ರಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಹಾವೇರಿಯಲ್ಲಿ ನಡೆದ ಊರಹಬ್ಬಕ್ಕೆ ಯಶ್ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ ಹಾವೇರಿಯ ಅಗಡಿ ಮೂಲದ ಹರೀಶ್ ಎರಡೂ ಕೈ ಕಳೆದುಕೊಂಡಿದ್ದರು. ಹರೀಶ್​ ಗೆ ಆದ ದುರಂತ ವಿಚಾರ ತಿಳಿದು ನಟ ಯಶ್​, ಆತನ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಿದ್ದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...

ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ – ಮಾರ್ಚ್ 14ರ ಒಳಗಾಗಿ ಈ ಕೆಲಸ ಕಡ್ಡಾಯ – ಇಲ್ಲಾಂದ್ರೆ ಆಧಾರ್ ಕಾರ್ಡ್ ಬಂದ್!

ಆಧಾರ್ ಕಾರ್ಡ್ ಇರುವ ದೇಶದ ಎಲ್ಲ ನಾಗರಿಕರಿಗೆ ಕೇಂದ್ರದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಬಿಗ್ ಶಾಕ್ ಇದೆ. ಮಾರ್ಚ್...

PUC ಪಾಸಾಗಿದ್ರೆ ಈ ಹುದ್ದೆಗಳಿಗೆ ಅಪ್ಲೈ ಮಾಡಿ..! ತಿಂಗಳಿಗೆ 63,000 ಸಂಬಳ

12ನೇ ತರಗತಿಯನ್ನು (PUC) ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ...
error: Content is protected !!