spot_img
spot_img
spot_img
spot_img
spot_img
spot_img

ಲವರ್ ಜೊತೆ ಸೇರಿ ಪತ್ನಿಯ ಹತ್ಯೆ- 19 ದಿನಗಳ ಬಳಿಕ ಕೆರೆಯಲ್ಲಿ ಶವ ಪತ್ತೆ

Published on

spot_img

ವಿವೇಕವಾರ್ತೆ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಜೊತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಘಟನೆ ದಾವಣಗೆರೆಯ (Davanagere) ಕೊಡಗನೂರಿನಲ್ಲಿ ನಡೆದಿದೆ. ಹತ್ಯೆಯ ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ ಗ್ರಾಮದ ಬಳಿಯ ಕೆರೆಗೆ ಎಸೆದಿದ್ದು, ಇದೀಗ ಕೊಲೆ ನಡೆದು 19 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಹತ್ಯೆಯಾದ ಮಹಿಳೆಯನ್ನು ಹೊಳಲ್ಕೆರೆಯ ಸಾಸಲುಹಳ್ಳ ಗ್ರಾಮದ ಕಾವ್ಯಾ ಎಂದು ಗುರುತಿಸಲಾಗಿದೆ. ಕಾವ್ಯಾಳನ್ನು ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ ಎಂಬಾತನಿಗೆ ಐದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಮಗು ಕೂಡ ಇತ್ತು. ಇಷ್ಟಾದರೂ ಸಚಿನ್ ಬೇರೆ ಹೆಣ್ಣಿನ ಸಹವಾಸದಿಂದ ಪತ್ನಿಯನ್ನು ಹತ್ಯೆಗೈದಿದ್ದಾನೆ.

ದಾವಣಗೆರೆಯ ಕಡ್ಲೆಬಾಳು ಗ್ರಾಮದ ನಿವಾಸಿ ಚೈತ್ರಾ ಎಂಬಾಕೆಯ ಹಿಂದೆ ಬಿದ್ದ ಸಚಿನ್ ಆಕೆಯನ್ನು ಕೂಡ ಎರಡನೇ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಇದೇ ವಿಚಾರಕ್ಕೆ ಗಲಾಟೆಯಾಗಿ ಕಾವ್ಯ ತವರು ಸೇರಿದ್ದಳು. ಮತ್ತೆ ಜ.6ರಂದು ಆಕೆಯನ್ನು ಸಚಿನ್ ಮರಳಿ ಕರೆದುಕೊಂಡು ಬಂದಿದ್ದ. ಈ ವೇಳೆ ಮತ್ತೆ ಗಲಾಟೆಯಾಗಿದ್ದು, ಚೈತ್ರಾ ಹಾಗೂ ಸಚಿನ್ ಸೇರಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದಾರೆ. ಬಳಿಕ ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದು ಹೋಗಿದ್ದಾರೆ.

ಇತ್ತ ಕಾವ್ಯಾಳ ಸುಳಿವಿಲ್ಲದೇ ಇರುವುದರಿಂದ ಅನುಮಾನಗೊಂಡ ಆಕೆಯ ಪೋಷಕರು ಚಿಕ್ಕಜಾಜೂರು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಪೊಲೀಸರು ಸಚಿನ್‍ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆಗೈದಿದ್ದಾಗಿ ಬಾಯ್ಬಿಟ್ಟಿದ್ದಾನೆ.

ಇದೀಗ ಪೊಲೀಸರು ಚೈತ್ರಾ ಹಾಗೂ ಸಚಿನ್‍ನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!