ವಿವೇಕವಾರ್ತೆ : ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆ ಮತ್ತೇ ಚುರುಕುಗೊಂಡಿದೆ. ಧಾರವಾಡದಲ್ಲಿ ಕೊಲೆ ಪ್ರಕರಣದ ಸಾಕ್ಷಿ ನಾಶಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿಚಾರಣೆಗೆ ಸಿಬಿಐ ಅಧಿಕಾರಿಗಳು ಮುಂದಾಗಿದ್ದಾರೆ.

ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಮನೆಗೆ ಆಗಮಿಸಿದ ಸಿಬಿಐ ಅಧಿಕಾರಿಗಳು ಅವರ ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಮನೆಯಲ್ಲಿ ಇಲ್ಲದ ಕಾರಣ ಅವರ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ಅವರನ್ನು ಕರೆ ತರಲು ಸೂಚನೆ ನೀಡಿದರು.
ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ಕುಟುಂಬ ಸದಸ್ಯರನ್ನು ಒಂದೆಡೆ ಸೇರಿಸಿ ಮಾಹಿತಿ ಕಲೆ ಹಾಕಿದ ಪೊಲೀಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ ವಿಚಾರಣೆಗಾಗಿ ಅವರ ಮನೆಯಲ್ಲಿ ಕುಳಿತು ಲೊಕೇಶನ್ ಚೆಕ್ ಮಾಡುತ್ತಿದ್ದಾರೆ.
ಯೋಗೇಶಗೌಡ ಹತ್ಯೆ ಪ್ರಕರಣದ ಸಾಕ್ಷಿ ನಾಶಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಹಿತಿ ಕಲೆ ಹಾಕಲು ಮುಂದಾಗಿದ್ದು, ಕೊಲೆ ಪ್ರಕರಣದಲ್ಲಿ ಉನ್ನತ ಅಧಿಕಾರಿಗಳು ಸಾಕ್ಷಿ ನಾಶಪಡಿಸಿರುವ ಕುರಿತು ಯೋಗೇಶಗೌಡ ಸಹೋದರ ಗುರುನಾಥಗೌಡ ಕೋರ್ಟ್ ಗೆ ಮನವಿಮಾಡಿದರು. ಈಗ ಸಿಬಿಐ ಅಧಿಕಾರಿಗಳು ಅಧಿಕಾರಿಗಳು ವಿಚಾರಣೆಗೆ ಮುಂದಾಗಿದ್ದಾರೆ.Source link