ಮಹಾರಾಷ್ಟ್ರದ ಪಾಲ್ಘಡ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ನಿರಂತರ 12 ಗಂಟೆ 8 ಮಂದಿ ಅತ್ಯಾಚಾರ ನಡೆಸಿದ್ದಾರೆ.
ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಸಮುದ್ರ ತೀರಕ್ಕೆ ಕರೆದೊಯ್ಯುವ ಮೊದಲು ಮಾಹಿಮ್ ಗ್ರಾಮದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.
ಆರೋಪಿಗಳ ವಿರುದ್ಧ ಸತ್ಪತಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376(ಡಿ), 366(ಎ), 341, 342, 323 ಮತ್ತು ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.