ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋಟೋ ಎಡಿಟ್ ಮಾಡಿ ಬ್ಲಾಕ್‍ಮೇಲ್

Published on

spot_img
spot_img

ಬೆಳಗಾವಿ: ಪ್ರೀತಿಸಲು ಒಪ್ಪದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

ಬಂಧನಕ್ಕೊಳಗಾದ ಆರೋಪಿಯನ್ನು ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ. ಆರೋಪಿ ಖಾನಾಪುರದ (Khanapur ) ಕಾಲೇಜಿನ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ನಗ್ನ ಚಿತ್ರದ ಜೊತೆ ಸೇರಿಸಿ ಎಡಿಟ್ ಮಾಡಿ ಕಿರುಕುಳ ಕೊಟ್ಟಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೆ ಆಕೆಯ ಮೂವರು ಸ್ನೇಹಿತೆಯರ ಫೋಟೋ ಬಳಸಿ ಇದೇ ರೀತಿ ಬ್ಲಾಕ್‍ಮೇಲ್ ಮಾಡಿದ್ದಾನೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಅಲ್ಲಿ ಅಪ್ಲೋಡ್ ಮಾಡಿದ್ದಾನೆ.

ಆರೋಪಿ ಬೆಂಗಳೂರಿನಲ್ಲಿ (Bengaluru) ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಡೀಪ್ ಫೇಕ್ ಆಪ್ ಮಾದರಿಯ ಮತ್ತೊಂದು ಆಪ್‍ನಲ್ಲಿ ಫೋಟೋ ಎಡಿಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಯುವತಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!