spot_img
spot_img
spot_img
spot_img
spot_img
spot_img

ಮಲಪ್ರಭಾ ನದಿಯಲ್ಲಿ ಮುಳುಗಿ ಯುವಕ ಸಾವು

Published on

spot_img

ಬೈಲಹೊಂಗಲ: ತಾಲೂಕಿನ ವಕ್ಕುಂದ ಗ್ರಾಮದ ಸನಿಹದ ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ವಕ್ಕುಂದ ಗ್ರಾಮದ ನಿವಾಸಿ ಆಕಾಶ ಚಂದ್ರಪ್ಪ ಭದ್ರಶೆಟ್ಟಿ (17) ಮೃತಪಟ್ಟವ. ಸ್ನೇಹಿತರೊದಿಗೆ ಈಜಲು ತೆರಳಿದ್ದ ಈತ ನೀರಿನಲ್ಲಿ ಮುಳುಗಿದ್ದಾನೆ. ಕೆಲವರು ಕಾಪಾಡಲು ಪ್ರಯತ್ನ ಪಟ್ಟರೂ ಸಫಲವಾಗಿಲ್ಲ. ತಕ್ಷಣ ಪೊಲೀಸ್ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ಸಿಬ್ಬಂದಿ, ಮೀನುಗಾರರು ತೆಪ್ಪ ಬಳಸಿ ಕಾರ್ಯಾಚರಣೆ ನಡೆಸಿದರೂ ಮೃತ ದೇಹ ಪತ್ತೆಯಾಗಲಿಲ್ಲ. ಬುಧವಾರ ಬೆಳಿಗ್ಗೆ ಮತ್ತೆ ನದಿಯಲ್ಲಿ ಕಾರ್ಯಾಚರಣೆ ನಡೆಸಿದಾಗ ಮೃತ ದೇಹ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿ ವಕ್ಕುಂದ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಮೃತದೇಹ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

ಪಿ ಎಸ್ ಐ ಗುರುರಾಜ ಕಲಬುರ್ಗಿ, ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಶಿವಾಜಿ ಕೊರವಿ, ಶಕೀಲ ಸನದಿ, ನಾಗರಾಜ ಹುದ್ದಾರ, ಶಿವಾನಂದ ಸೋಮನ್ನವರ, ಮಹಾಂತೇಶ ಸಂಗೊಳ್ಳಿ, ಮದಕಟ್ಟಿ, ಮಲ್ಲಿಕಾರ್ಜುನ ಗಾಣಿಗೇರ ಹಾಗೂ ಸ್ಥಳೀಯ ಮೀನುಗಾರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!